ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸ್ವಸಹಾಯ ಗುಂಪುಗಳಿಗೆ ಇನ್ನಷ್ಟು ಸಾಲ: ವೀರೇಂದ್ರ ಹೆಗ್ಗಡೆ (Veerendra Heggade | Congress | BJP | Dharmasthala)
Bookmark and Share Feedback Print
 
ಮಹಿಳೆಯರ ಸ್ವಾವಲಂಬಿ ಜೀವನಕ್ಕೆ 9,451 ಸ್ವ ಸಹಾಯ ಗುಂಪುಗಳು ರಚನೆಯಾಗಿವೆ. ಸದಸ್ಯರು 4.5 ಕೋಟಿ ರೂ.ಉಳಿತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ 100 ಕೋಟಿ ರೂ. ಸಾಲ ನೀಡುವ ಯೋಜನೆ ಹಮ್ಮಿ ಕೊಳ್ಳಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಒಕ್ಕೂಟಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಳಿತಾಯಕ್ಕೆ ಈ ಪ್ರಗತಿ ಬಂಧು ಸಹಾಯ ಸಂಘದ ಪರಿಕಲ್ಪನೆ ಕಾರಣವಾಗಿದೆ. ಜಿಲ್ಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ 9,451 ಸ್ವ ಸಹಾಯ ಗುಂಪುಗಳು ರಚನೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಇಂದು ಧರ್ಮ, ಸಂಸ್ಕೃತಿ ಬದುಕಿರಲು ಮಹಿಳೆಯರೇ ಕಾರಣ. ಆರ್ಥಿಕ ಸ್ವಾವಲಂಬನೆಯಿಂದ ಜೀವನ ನಡೆಸಬೇಕಾದರೆ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳ ಬೇಕೆಂದರು.
ಸಂಬಂಧಿತ ಮಾಹಿತಿ ಹುಡುಕಿ