ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Dollar | Rupee | Forex | Foreign funds)
Bookmark and Share Feedback Print
 
ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳ ಹಾಗೂ ಏಷ್ಯಾದ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 46 ಪೈಸೆ ಇಳಿಕೆಯಾಗಿ 47.32 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 18 ಪೈಸೆ ಇಳಿಕೆ ಕಂಡು 46.86/87 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 46 ಪೈಸೆ ಇಳಿಕೆಯಾಗಿ 47.32 ರೂಪಾಯಿಗಳಿಗೆ ಕುಸಿತ ಕಂಡಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳ ಹಾಗೂ ಏಷ್ಯಾದ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ,ರೂಪಾಯಿ ಮೌಲ್ಯದ ಇಳಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 430.96 ಪಾಯಿಂಟ್‌ಗಳ ಕುಸಿತ ಕಂಡು 16,686.73 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ