ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 3ಜಿ ಸೇವೆ: ಬಿಎಸ್‌ಎನ್‌ಎಲ್, ಭಾರತೀಯ ರೈಲ್ವೆ ಒಪ್ಪಂದ (BSNL | Indian Railways | Partners | 3G services | Publicise)
Bookmark and Share Feedback Print
 
ಸರಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್, ಭಾರತೀಯ ರೈಲ್ವೆ ಇಲಾಖೆಯ ಸಹಭಾಗಿತ್ವದಲ್ಲಿ 3ಜಿ ಸೇವೆ ಪ್ರಚಾರವನ್ನು ಕೈಗೊಳ್ಳಲಾಗುತ್ತದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಒಪ್ಪಂದದ ಪ್ರಕಾರ, ಚೆನ್ನೈ ರಾಜಧಾನಿ ಎಕ್ಸ್‌ಪ್ರೆಸ್, ಬಿಎಸ್‌ಎನ್‌ಎಲ್‌ನ 3ಜಿ ಲೋಗೋ ಹಾಗೂ ಜಾಹೀರಾತು ಫಲಕಗಳನ್ನು ಹೊಂದಲಿದೆ ಎಂದು ಬಿಎಸ್‌ಎನ್‌ಎಲ್ ಮೂಲಗಳು ತಿಳಿಸಿವೆ.

ಪ್ರಥಮ ಬಾರಿಗೆ ರೈಲ್ವೆ ಇಲಾಖೆಯ ಸಹಭಾಗಿತ್ವದಲ್ಲಿ 3ಜಿ ಸೇವೆಯ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ರೈಲುಗಳಲ್ಲಿ 3ಜಿ ಪ್ರಚಾರ ಸೇವೆಯನ್ನು ಆರಂಭಿಸುವ ಯೋಜನೆಯನ್ನು ಹೊಂದಿದೆ ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕುಲದೀಪ್ ಗೋಯಲ್ ತಿಳಿಸಿದ್ದಾರೆ.

ಪ್ರಸ್ತುತ 1.25 ಮಿಲಿಯನ್ ಗ್ರಾಹಕರನ್ನು ಹೊಂದಲಾಗಿದ್ದು, ಆರ್ಥಿಕ ವರ್ಷಾಂತ್ಯಕ್ಕೆ ನಾಲ್ಕು ಮಿಲಿಯನ್ ಗ್ರಾಹಕರನ್ನು ಸೇರ್ಪಡೆಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೋಯಲ್ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ