ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕೋರಂ ಅಭಾವ:ಪೆಟ್ರೋಲ್ ದರ ಏರಿಕೆ ಮುಂದೂಡಿಕೆ (EGoM | Petrol prices | Pranab Mukherjee | Government | Mamata Banerjee)
Bookmark and Share Feedback Print
 
ತೈಲ ದರಗಳ ಏರಿಕೆಗಾಗಿ ನಿಯುಕ್ತಿಗೊಳಿಸಲಾದ ಅಧಿಕಾರಯುತ ಸಚಿವ ಸಂಪುಟ ಸಮಿತಿ.ಕೋರಂ ಅಭಾವದಿಂದಾಗಿ, ದರ ಏರಿಕೆ ಮಾಡುವ ನಿರ್ಧಾರವನ್ನು ಮುಂದೂಡಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪೆಟ್ರೋಲ್ ದರ ಏರಿಕೆಯನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ, ಪ್ರತಿ ಲೀಟರ್‌ ಡೀಸೆಲ್‌ಗೆ 2 ರೂಪಾಯಿ ಹೆಚ್ಚಳ ಮಾಡುವ ಉದ್ದೇಶ ಹೊಂದಲಾಗಿತ್ತು ಎಂದು ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದೇವ್ರಾ ತಿಳಿಸಿದ್ದಾರೆ.

ಕೇಂದ್ರದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ನೇತೃತ್ವದ ಅಧಿಕಾರಯುತ ಸಚಿವ ಸಂಪುಟ ಸಮಿತಿ,ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಕೃಷಿ ಸಚಿವ ಶರದ್ ಪವಾರ್ ಸೇರಿದಂತೆ ನಾಲ್ಕು ಪ್ರಮುಖ ಸಚಿವರುಗಳ ಅನುಪಸ್ಥಿತಿಯಲ್ಲಿ, ತೈಲ ದರ ಏರಿಕೆ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಖಾತೆ ಸಚಿವೆ ಮಮತಾ ಬ್ಯಾನರ್ಜಿ ಕೋಲ್ಕತಾದಲ್ಲಿ ಮಾತನಾಡಿ, ತಮ್ಮ ಪಕ್ಷವಾದ ತೃಣಮೂಲ ಕಾಂಗ್ರೆಸ್ ಡೀಸೆಲ್, ಅಡುಗೆ ಅನಿಲ ಮತ್ತು ಸೀಮೆಎಣ್ಣೆ ದರ ಏರಿಕೆಯನ್ನು ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ