ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee| Forex| Dollar)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 46.96 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 22 ಪೈಸೆ ಇಳಿಕೆ ಕಂಡು 47.08/09 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 46.96 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಲು ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 59.46 ಪಾಯಿಂಟ್‌ಗಳ ಏರಿಕೆ ಕಂಡು 16,840.53 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್