ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಅಲ್ಪ ಕುಸಿತ (Rupee| Dollar | Forex | Importers)
Bookmark and Share Feedback Print
 
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ 2 ಪೈಸೆ ಕುಸಿತ ಕಂಡು 46.95 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 15 ಪೈಸೆ ಏರಿಕೆ ಕಂಡು 46.93/94 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 2 ಪೈಸೆ ಕುಸಿತ ಕಂಡು 46.95 ರೂಪಾಯಿಗಳಿಗೆ ತಲುಪಿದೆ.

ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ. ಆದರೆ ಶೇರುಪೇಟೆ ಚೇತರಿಕೆ ಕಂಡಿದ್ದರಿಂದ ರೂಪಾಯಿ ಮೌಲ್ಯದ ಭಾರಿ ಕುಸಿತಕ್ಕೆ ಅಡ್ಡಿಯಾಗಿದೆ ಎಂದು ಪಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 66.26 ಪಾಯಿಂಟ್‌ಗಳಿಗೆ ಚೇತರಿಕೆ ಕಂಡು 16,683.36 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ