ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೆಚ್ಚಳ (Car sales | May | Motorcycle | SIAM)
Bookmark and Share Feedback Print
 
ದೇಶಿಯ ಪ್ರಯಾಣಿಕ ಕಾರುಗಳ ಮಾರಾಟ ಮೇ ತಿಂಗಳ ಅವಧಿಯಲ್ಲಿ ಶೇ.30.46 ರಷ್ಟು ಹೆಚ್ಚಳವಾಗಿ 1,48,481ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಮೇ ತಿಂಗಳ ಅವಧಿಯಲ್ಲಿ 1,13810 ಕಾರುಗಳನ್ನು ಮಾರಾಟ ಮಾಡಲಾಗಿತ್ತು.

ಸೂಸೈಟಿ ಆಫ್ ಇಂಡಿಯನ್ ಅಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್‌(ಸಿಯಾಮ್)ಸಂಸ್ಥೆಯ ಪ್ರಕಾರ, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.25.80ರಷ್ಟು ಹೆಚ್ಚಳವಾಗಿ, 7,25,311ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಮೇ ತಿಂಗಳ ಅವಧಿಯಲ್ಲಿ 5,76,537 ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ವಾಣಿಜ್ಯಿಕ ವಾಹನಗಳ ಮಾರಾಟದಲ್ಲಿ ಶೇ.57.71ರಷ್ಟು ಹೆಚ್ಚಳವಾಗಿ, 48,580 ವಾಹನಗಳನ್ನು ಮಾರಾಟ ಮಾಡಲಾಗಿದೆ.ಕಳೆದ ವರ್ಷದ ಅವಧಿಯಲ್ಲಿ 30,803 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಸಿಯಾಮ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು ವಾಹನಗಳ ಮಾರಾಟದಲ್ಲಿ ಶೇ.30ರಷ್ಟು ಹೆಚ್ಚಳವಾಗಿ, 12,08,851 ವಾಹನಗಳನ್ನು ಮಾರಾಟ ಮಾಡಲಾಗಿದೆ.ಕಳೆದ ವರ್ಷದ ಮೇ ತಿಂಗಳ ಅವಧಿಯಲ್ಲಿ 9,29,917 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಸಿಯಾಮ್ ವರದಿಯಲ್ಲಿ ಬಹಿರಂಗಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ