ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Stock market|Indian rupee|Sensex)
Bookmark and Share Feedback Print
 
ಶೇರುಪೇಟೆ ಚೇತರಿಕೆಯ ಬೆಂಬಲದಿಂದಾಗಿ.ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆಯಾಗಿ 46.96 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 8 ಪೈಸೆ ಕುಸಿತ ಕಂಡು 47.01/02 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆಯಾಗಿ 46.96 ರೂಪಾಯಿಗಳಿಗೆ ತಲುಪಿದೆ.

ಫಾರೆಕ್ಸ್ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಅಮುದು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 95.51 ಪಾಯಿಂಟ್‌ಗಳ ಏರಿಕೆ ಕಂಡು 16,753.40 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ