ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Forex | Dollar)
Bookmark and Share Feedback Print
 
ಏಷ್ಯಾದ ಕರೆನ್ಸಿಗಳ ಎದುರು ಅಮೆರಿಕದ ಕರೆನ್ಸಿ ಡಾಲರ್ ದುರ್ಬಲಗೊಂಡಿದ್ದರಿಂದ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 22 ಪೈಸೆ ಏರಿಕೆಯಾಗಿ 46.73 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 6 ಪೈಸೆ ಏರಿಕೆ ಕಂಡು 46.95/96 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 22 ಪೈಸೆ ಏರಿಕೆಯಾಗಿ 46.73 ರೂಪಾಯಿಗಳಿಗೆ ತಲುಪಿದೆ.

ಶೇರುಪೇಟೆ ಚೇತರಿಕೆ ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ದುರ್ಬಲ ಡಾಲರ್ ವಹಿವಾಟಿನಿಂದಾಗಿ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಲು ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 184.67 ಪಾಯಿಂಟ್‌ಗಳ ಏರಿಕೆ ಕಂಡು 17,106.75 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್