ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಉತ್ತೇಜನ ಪ್ಯಾಕೇಜ್‌ಗಳು ನಿಧಾನವಾಗಿ ಹಿಂದಕ್ಕೆ: ಮೊಂಟೆಕ್ (Industrial growth | Govt policies | Stimulus | Montek Singh Ahluwalia)
Bookmark and Share Feedback Print
 
ಕೈಗಾರಿಕೆ ವೃದ್ಧಿ ದರ ಗರಿಷ್ಠ ಶೇ.17ಕ್ಕೆ ತಲುಪಿದ ಹಿನ್ನೆಲೆಯಲ್ಲಿ,ಸರಕಾರದ ಆರ್ಥಿಕ ನೀತಿಗಳು ಪರಿಣಾಮ ಬೀರುತ್ತಿದ್ದು,ಉತ್ತೇಜನ ಪ್ಯಾಕೇಜ್‌ಗಳನ್ನು ನಿಧಾನವಾಗಿ ಹಿಂದಕ್ಕೆ ಪಡೆಯಬೇಕು ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.

ಕೇಂದ್ರ ಸರಕಾರದ ಆರ್ಥಿಕ ನೀತಿಗಳು, ದೇಶದ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಭೀರುತ್ತಿರುವುದರಿಂದ, ಮುಂಬರುವ ದಿನಗಳಲ್ಲಿ ಹೂಡಿಕೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದಿಂದ ಕಂಗಾಲಾದ ಕ್ಷೇತ್ರಗಳಿಗೆ ಚೇತರಿಕೆ ನೀಡಲು ಸರಕಾರ ಘೋಷಿಸಿದ ಉತ್ತೇಜನ ಪ್ಯಾಕೇಜ್‌‌ಗಳನ್ನು ಪ್ರಸ್ತುತ ನಿಧಾನವಾಗಿ ಹಿಂದಕ್ಕೆ ಪಡೆಯುವುದು ಸೂಕ್ತ. ದೇಶದ ಕೈಗಾರಿಕೆ ಉದ್ಯಮ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರದ ವಿತ್ತಸಚಿವಾಲಯ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್,ಉತ್ತೇಜನ ಪ್ಯಾಕೇಜ್‌ಗಳನ್ನು ಹಿಂದಕ್ಕೆ ಪಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ದೇಶದ ಆರ್ಥಿಕ ನೀತಿಗಳು ಸದೃಢವಾಗಿವೆ ಎಂದು ಹೇಳಿದ್ದಾರೆ.

2010-2011ರ ಅವಧಿಯಲ್ಲಿ ಪ್ರಬಲ ಕೈಗಾರಿಕೆ ಅಭಿವೃದ್ಧಿ ನಮ್ಮ ಗುರಿಯಾಗಿದೆ. ದೇಶದ ಆರ್ಥಿಕ ವೃದ್ಧಿ ದರ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ಶೇ.8.5ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ