ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶದ ವಿದೇಶಿ ವಿನಿಮಯ ಸಂಗ್ರಹದಲ್ಲಿ ಕುಸಿತ (Foreign exchange | Reserves | Gold reserves | RBI)
Bookmark and Share Feedback Print
 
ದೇಶದ ವಿದೇಶಿ ವಿನಿಮಯ ಸಂಗ್ರಹ ಸತತ ಎರಡನೇ ವಾರದ ಅವಧಿಯಲ್ಲಿ ಕುಸಿತ ಕಂಡು 271.093 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ ಎಂದು ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಸಂಗ್ರಹ ಪ್ರಸಕ್ತ ವಾರದ ಅವಧಿಯಲ್ಲಿ 245.552 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ.ಕಳೆದ ವಾರದ ಅವಧಿಯಲ್ಲಿ ವಿದೇಶಿ ವಿನಿಮಯ ಸಂಗ್ರಹ 247,263 ಬಿಲಿಯನ್ ಡಾಲರ್‌ಗಳಿಗೆ ತಲುಪಿತ್ತು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿದ ವಾರದ ಅವಧಿಯ ವರದಿಯಲ್ಲಿ ಬಹಿರಂಗಪಡಿಸಿದೆ.

ವಿದೇಶಿ ವಿನಿಮಯ ಸಂಗ್ರಹದ ಏರಿಳಿಕೆಯನ್ನು ಡಾಲರ್‌ ಮೌಲ್ಯದಲ್ಲಿ ಪರಿಗಣಿಸಲಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ವಾರದಲ್ಲಿ ಚಿನ್ನದ ಮೀಸಲು ಸಂಗ್ರಹ 19,423 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ.ಕಳೆದ ವಾರದ ಅವಧಿಯಲ್ಲಿ 18,537 ಬಿಲಿಯನ್ ಡಾಲರ್‌ಗಳಿಗೆ ತಲುಪಿತ್ತು.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ನಿಧಿಯಲ್ಲಿ ಭಾರತದ ವಿದೇಶಿ ಮೀಸಲು ಸಂಗ್ರಹ,1,298 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಕಳೆದ ವಾರದ ಅವಧಿಯಲ್ಲಿ 1,309 ಬಿಲಿಯನ್ ಡಾಲರ್‌ಗಳಿಗೆ ತಲುಪಿತ್ತು ಎಂದು ಆರ್‌ಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ