ಇನ್ಮುಂದೆ ಹುಷಾರಾಗಿರಿ...ಶಂಕಿತ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಶೀಘ್ರದಲ್ಲಿಯೇ ಸೂಚನೆ ಹೊರಡಿಸುವ ಸಾಧ್ಯತೆ ಇರುವುದಾಗಿ ಮೂಲವೊಂದು ತಿಳಿಸಿದೆ.
ಬ್ಯಾಂಕುಗಳು ಇತ್ತೀಚೆಗೆ ಆರಂಭಿಸಿರುವ ನಿಮ್ಮ ಗ್ರಾಹಕರನ್ನು ತಿಳಿಯಿರಿ ಅಭಿಯಾನದಡಿ ಕಂಡುಬಂದ ಶಂಕಿತ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಹಣಕಾಸು ಸಚಿವಾಲಯ ಬ್ಯಾಂಕುಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಸರ್ಕಾರಿ ಹಾಗೂ ಖಾಸಗಿ ವಲಯದ ಬ್ಯಾಂಕುಗಳು ತಮ್ಮ ಹಳೆಯ ಮತ್ತು ಹೊಸ ಗ್ರಾಹಕರ ಬಗ್ಗೆ ವಿವರಗಳನ್ನು ಕಲೆಹಾಕುತ್ತಿದೆ. ನಿಮ್ಮ ಗ್ರಾಹಕರನ್ನು ತಿಳಿಯಿರಿ ಅಭಿಯಾನದಡಿ ಬ್ಯಾಂಕುಗಳು ತಮ್ಮ ಖಾತೆದಾರರಿಗೆ ಸ್ವವಿವರಗಳನ್ನು ನೀಡುವಂತೆ ಸೂಚಿಸಿವೆ.
ಮೇ ತಿಂಗಳ ಅಂತ್ಯಕ್ಕೆ ಇದು ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಈ ವಿವರಗಳಲ್ಲಿ ಯಾವುದಾದರೂ ಸಂಶಯಾಸ್ಪದ ಖಾತೆಗಳು ಕಂಡುಬಂದಲ್ಲಿ ಅವುಗಳನ್ನು ಸ್ಥಗಿತಗೊಳಿಸಲು ಸರ್ಕಾರ ಸೂಚನೆ ನೀಡಲಿದೆ ಎಂದು ಹಣಕಾಸು ಸಚಿವಾಲಯ ವಿವರಿಸಿದೆ.