ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 12 ಪೈಸೆ ಏರಿಕೆ ಕಂಡು 46.83/84 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 26 ಪೈಸೆ ಏರಿಕೆ ಕಂಡು 46.57 ರೂಪಾಯಿಗಳಿಗೆ ತಲುಪಿದೆ.
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 172.71 ಪಾಯಿಂಟ್‌ಗಳಿಗೆ ಏರಿಕೆಯಾಗಿ 17,237.66 ಅಂಕಗಳಿಗೆ ತಲುಪಿದೆ.