ಶೇರುಪೇಟೆಯ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 34 ಪೈಸೆ ಏರಿಕೆ ಕಂಡು 46.49/50 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 8 ಪೈಸೆ ಇಳಿಕೆ ಕಂಡು 46.57 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಶೇರುಗಳ ಮಾರಾಟದ ಒತ್ತಡದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ.ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆ ವಹಿವಾಟು ಕೂಡಾ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 35.91 ಪಾಯಿಂಟ್‌ಗಳ ಏರಿಕೆ ಕಂಡು 17,302.26 ಅಂಕಗಳಿಗೆ ತಲುಪಿದೆ.