ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Foreign exchange | Global funds | Dollar)
Bookmark and Share Feedback Print
 
ಶೇರುಪೇಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 17 ಪೈಸೆ ಏರಿಕೆಯಾಗಿ 46.39 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 7 ಪೈಸೆ ಕುಸಿತ ಕಂಡು 46.56/57 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 17 ಪೈಸೆ ಏರಿಕೆಯಾಗಿ 46.39 ರೂಪಾಯಿಗಳಿಗೆ ತಲುಪಿದೆ.

ಶೇರುಪೇಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 111.05ಪಾಯಿಂಟ್‌ಗಳ ಏರಿಕೆ ಕಂಡು 17.523.88 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ