ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜಿಡಿಪಿ ದರ ಶೇ.9.2ಕ್ಕೆ ಏರಿಕೆಯಾಗುವ ಸಾಧ್ಯತೆ:ಸಿಎಂಐಇ (India | GDP | CMIE | Economic slowdown | Indian economy)
Bookmark and Share Feedback Print
 
ಜಾಗತಿಕ ಆರ್ಥಿಕ ಕುಸಿತ ಎರಡು ವರ್ಷಗಳ ನಂತರ, ಭಾರತದ ಆರ್ಥಿಕತೆ ಪ್ರಮುಖ ಕ್ಷೇತ್ರಗಳಾದ ಕೈಗಾರಿಕೆ, ಸೇವಾ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಚೇತರಿಕೆ ಕಂಡಿದ್ದರಿಂದ ವರ್ಷಾಂತ್ಯಕ್ಕೆ, ಜಿಡಿಪಿ ದರ ಶೇ.9ಕ್ಕೆ ತಲುಪಲಿದೆ ಎಂದು ಸಿಎಂಐಇ ಮೂಲಗಳು ತಿಳಿಸಿವೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೂರು ಕ್ಷೇತ್ರಗಳು ಅತ್ಯುತ್ತಮ ಸಾಧನೆ ಮಾಡುವ ಸಾಧ್ಯತೆಗಳಿವೆ. ದೇಶದ ಜಿಡಿಪಿ ದರ ಶೇ.9.2ಕ್ಕೆ ತಲುಪಲಿದೆ ಎಂದು ಸೆಂಟರ್ ಫಾರ್ ಇಂಡಿಯನ್ ಮಾನಿಟೊರಿಂಗ್ (ಸಿಎಂಐಇ) ವರದಿಯಲ್ಲಿ ಬಹಿರಂಗಪಡಿಸಿದೆ.

2009-10ರ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇ.7.4ರಷ್ಟಾಗಿತ್ತು.2010-11ರ ಅವಧಿಯಲ್ಲಿ ದೇಶದ ಆರ್ಥಿಕತೆ ಶೇ.9.2ಕ್ಕೆ ಏರಿಕೆಯಾಗುವ ನಿರೀಕ್ಷೆಗಳಿವೆ ಎಂದು ವರದಿಯಲ್ಲಿ ಪ್ರಕಟಿಸಿದೆ.

ಏತನ್ಮಧ್ಯೆ, ಭಾರತೀಯ ರಿಸರ್ವ್ ಬ್ಯಾಂಕ್ ಜಿಡಿಪಿ ದರ ಶೇ.8.2ಕ್ಕೆ ಏರಿಕೆಯಾಗುವ ನಿರೀಕ್ಷೆಗಳಿವೆ ಎಂದು ಈಗಾಗಲೇ ಭವಿಷ್ಯ ನುಡಿದಿದೆ.
ಸಂಬಂಧಿತ ಮಾಹಿತಿ ಹುಡುಕಿ