ಮುಂದಿನ ವಾರ ಜಿ20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಸ್ಟೆಫನ್ ಹಾರ್ಪರ್, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಚೀನಾದ ಅಧ್ಯಕ್ಷ ಹು ಜಿಂಟಾವೊ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಾರ್ಪರ್ ಮತ್ತು ಹು ಜಿಂಟಾವೊ ಗುರುವಾರದಂದು ಭೇಟಿ ಮಾಡಲಿದ್ದು, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತಂತೆ ಚರ್ಚಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆನಡಾ ಮತ್ತು ಚೀನಾ ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ, ಬಾಂಧವ್ಯ ವೃದ್ಧಿ ಹಾಗೂ ವ್ಯಾಪಾರ ವಹಿವಾಟು ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಕೆನಡಾದ ಪ್ರಧಾನಿ ಹಾರ್ಪರ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆನಡಾ ಮತ್ತು ಭಾರತ ದೇಶಗಳು ವಾಣಿಜ್ಯಿಕ, ಸಾಂಸ್ಕ್ರತಿಕ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೂಡಿಕೆಯಲ್ಲಿ ಹೆಚ್ಚಳಗೊಳಿಸಲಿವೆ.ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚಿಸುವುದಾಗಿ ಕೆನಡಾ ಪ್ರಧಾನಿ ಹಾರ್ಪರ್ ತಿಳಿಸಿದ್ದಾರೆ.