ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Dollar | Capital inflows)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 58 ಪೈಸೆ ಏರಿಕೆಯಾಗಿ 45.58 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ದುರ್ಬಲ ವಹಿವಾಟಿನಿಂದಾಗಿ, ರೂಪಾಯಿ ಮೌಲ್ಯದ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 14 ಪೈಸೆ ಏರಿಕೆ ಕಂಡು 46.16/17 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 58 ಪೈಸೆ ಏರಿಕೆಯಾಗಿ 45.58 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 233.60 ಪಾಯಿಂಟ್‌ಗಳ ಏರಿಕೆ ಕಂಡು 17,804.42 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ