ಮದುವೆ ಸೀಜನ್ ಮುಂದಿರುವಂತೆ ಚಿನ್ನದ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದು, ಚಿನ್ನದ ದರದಲ್ಲಿ ಪ್ರತಿ 10ಗ್ರಾಂಗೆ 20 ರೂಪಾಯಿಗಳ ಏರಿಕೆಯಾಗಿ 19,145 ರೂಪಾಯಿಗಳಿಗೆ ತಲುಪಿದೆ.
ಕೈಗಾರಿಕೋದ್ಯಮ ಕ್ಷೇತ್ರದಿಂದ ಹೆಚ್ಚಿನ ಬೇಡಿಕೆ ಎದುರಾದ ಹಿನ್ನೆಲೆಯಲ್ಲಿ ಬೆಳ್ಳಿ ದರದಲ್ಲಿ ಪ್ರತಿ ಕೆಜಿಗೆ 50 ರೂಪಾಯಿಗಳಷ್ಟು ಏರಿಕೆಯಾಗಿ 30,150 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಜಾಗತಿಕ ಆರ್ಥಿಕ ತೊಳಲಾಟದಿಂದಾಗಿ, ಸುರಕ್ಷಿತ ಠೇವಣಿಯಾದ ಚಿನ್ನ ಖರೀದಿಗೆ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿದ್ದರಿಂದ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 1,263.90 ಡಾಲರ್‌ಗಳಿಗೆ ತಲುಪಿದೆ.
ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಸ್ಥಿರ ವಹಿವಾಟಿನಿಂದಾಗಿ, ದೇಶಿಯ ಮಾರುಕಟ್ಟೆಗಳಲ್ಲಿ ಕೂಡಾ ಚಿನ್ನದ ದರದಲ್ಲಿ ಏರಿಕೆಯಾಗಿದೆ.