ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 13 ಪೈಸೆ ಕುಸಿತ (Rupee | Markets | Dollar)
Bookmark and Share Feedback Print
 
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13ಪೈಸೆ ಕುಸಿತವಾಗಿ 45.88 ರೂಪಾಯಿಗಲಿಗೆ ತಲುಪಿದೆ.

ದುರ್ಬಲ ಏಷ್ಯಾ ಮಾರುಕಟ್ಟೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆ ಕೂಡಾ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 41 ಪೈಸೆ ಏರಿಕೆ ಕಂಡು 45.75/76 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13ಪೈಸೆ ಕುಸಿತವಾಗಿ 45.88 ರೂಪಾಯಿಗಳಿಗೆ ತಲುಪಿದೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 90.47 ಪಾಯಿಂಟ್‌ಗಳ ಏರಿಕೆ ಕಂಡು 17,786.08 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್