ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಸ್ಥಿರ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸೆ ಏರಿಕೆಯಾಗಿ 46.21 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 49 ಪೈಸೆ ಇಳಿಕೆ ಕಂಡು 46.24\25 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 3 ಪೈಸೆ ಏರಿಕೆ ಕಂಡು 46.21 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಸ್ಥಿರ ವಹಿವಾಟು ಹಾಗೂ ದೇಶಿಯ ಶೇರುಪೇಟೆಯ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಅಲ್ಪ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಮಾಸಾಂತ್ಯದ ಹಿನ್ನೆಲೆಯಲ್ಲಿ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ ರೂಪಾಯಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 120.50 ಪಾಯಿಂಟ್‌ಗಳ ಇಳಿಕೆ ಕಂಡು, 17,629.19 ಅಂಕಗಳಿಗೆ ತಲುಪಿದೆ.