ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | Foreign funds | Forex)
Bookmark and Share Feedback Print
 
ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿ 46.53ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಅಲ್ಪ ಇಳಿಕೆಯೊಂದಿಗೆ 46.49/50 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಕುಸಿತವಾಗಿ 46.53ರೂಪಾಯಿಗಳಿಗೆ ತಲುಪಿದೆ.

ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸಾಗರೋತತ್ರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆ ಹಾಗೂ ಶೇರುಪೆಟಯ ದುರ್ಬಲ ವಹಿವಾಟು ಕೂಡಾ ರೂಪಾಯಿ ಮೌಲ್ಯದಲ್ಲಿ ಇಳಿಕೆಗೆ ನಾಂದಿಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 91.64 ಪಾಯಿಂಟ್‌ಗಳ ಇಳಿಕೆ ಕಂಡು 17,638.60 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ