ದೇಶದ ಆರ್ಥಿಕ ಚೇತರಿಕೆಯಿಂದಾಗಿ 11ನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ, ಜಿಡಿಪಿ ದರ ಶೇ8.1ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ..
11ನೇ ಪಂಚವಾರ್ಷಿಕ ಯೋಜನೆಯಲ್ಲಿ ಶೇ.8.1ರಷ್ಟು ಆರ್ಥಿಕ ವೃದ್ಧಿ ದರಕ್ಕೆ ಏರಿಕೆಯಾಗಲಿದೆ. ಅಥವಾ ಅದಕ್ಕಿಂತ ಹೆಚ್ಚಿನ ಜಿಡಿಪಿ ದರ ತಲುಪುವ ನಿರೀಕ್ಷೆಯಿದೆ ಎಂದು ಮೊಂಟೆಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನ್ಯಾಷನಲ್ ಡೆವಲೆಪ್‌ಮೆಂಟ್ ಕೌನ್ಸಿಲ್, ಜುಲೈ 24 ರಂದು ಸಭೆ ಸೇರಲಿದ್ದು, ಮಧ್ಯಂತರ ವರದಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.
ಪಂಚವಾರ್ಷಿಕ ಯೋಜನೆಯಲ್ಲಿ, ದೇಶದ ಆರ್ಥಿಕ ವೃದ್ಧಿ ದರ ಶೇ.9ಕ್ಕೆ ತಲುಪುವ ಸಾಧ್ಯತೆಗಳಿವೆ.ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಡಿಪಿ ದರ ಶೇ.7.1ರ್ರೆ ರುಸಿತ ಕಂಡಿತ್ತು.