ವಿದೇಶಿ ಬಂಡವಾಳದ ಹೊರಹರಿವು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 27 ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 27 ಪೈಸೆ ಏರಿಕೆ ಕಂಡು 47.04 ರೂಪಾಯಿಗಳಿಗೆ ತಲುಪಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 17 ಪೈಸೆ ಏರಿಕೆ ಕಂಡು 46.77/78 ರೂಪಾಯಿಗಳಿಗೆ ತಲುಪಿತ್ತು.
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 99.42 ಪಾಯಿಂಟ್‌ಗಳ ಕುಸಿತ ಕಂಡು 17,856.40 ಅಂಕಗಳಿಗೆ ತಲುಪಿದೆ.