ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Foreign funds | US dollar | Forex)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 47.23 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗಎ ರೂಪಾಯಿ ಮೌಲ್ಯದಲ್ಲಿ 23 ಪೈಸೆ ಕುಸಿತವಾಗಿ 47.34/35 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಏರಿಕೆಯಾಗಿ 47.23 ರೂಪಾಯಿಗಳಿಗೆ ತಲುಪಿದೆ.

ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯಜ ದುರ್ಬಲತೆ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 105.35 ಪಾಯಿಂಟ್‌ಗಳ ಏರಿಕೆ ಕಂಡು 17,983.49 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ