ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | US currency | Sensex)
Bookmark and Share Feedback Print
 
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಕುಸಿತವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ, ಡಾಲರ್ ಎದುರಿಗೆ ರೂಪಾಯಿ 15 ಪೈಸೆ ಕುಸಿತ ಕಂಡು 47.30 ರೂಪಾಯಿಗಳಿಗೆ ತಲುಪಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 19 ಪೈಸೆ ಚೇತರಿಕೆ ಕಂಡು 47.15/16 ರೂಪಾಯಿಗಳಿಗೆ ತಲುಪಿತ್ತು.

ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 60.38 ಪಾಯಿಂಟ್‌ಗಳ ಕುಸಿತ ಕಂಡು 17,916.85 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ