ದೇಶದ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಎರಡನೇ ಸ್ಥಾನದಲ್ಲಿರುವ ಬಜಾಜ್ ಅಟೋ ಕಂಪೆನಿ, ಜೂನ್ 30ಕ್ಕೆ ತ್ರೈಮಾಸಿಕ ಅಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ದ್ವಿಗುಣವಾಗಿ 590.15 ಕೋಟಿ ರೂಪಾಯಿಗಳಿಗೆ ತಲುಪಿದೆ.
ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 293.49 ಕೋಟಿ ರೂಪಾಯಿಗಳಾಗಿತ್ತು ಎಂದು ಮುಂಬೈ ಶೇರುಪೇಟೆಗೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ.
ಸತತ ನಾಲ್ಕನೇ ಬಾರಿಗೆ ತ್ರೈಮಾಸಿಕ ನಿವ್ವಳ ಲಾಭದಲ್ಲಿ ಗರಿಷ್ಠ ಏರಿಕೆಯನ್ನು ಕಂಡಿದೆ ಎಂದು ಬಜಾಜ್ ಅಟೋ ಕಂಪೆನಿ ಮೂಲಗಳು ತಿಳಿಸಿವೆ.
ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಒಟ್ಟು ಆದಾಯದಲ್ಲಿ ಶೇ.66.35ರಷ್ಟು ಏರಿಕೆಯಾಗಿ 3,890.06 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 2,338.47 ಕೋಟಿ ರೂಪಾಯಿಗಳಾಗಿತ್ತು ಎಂದು ಕಂಪೆನಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ತ್ರೈಮಾಸಿಕ ಅವಧಿಯ ವಾಹನಗಳ ಮಾರಾಟದಲ್ಲಿ ಶೇ.69.51ರಷ್ಟು ಏರಿಕೆಯಾಗಿ 9,28,336 ವಾಹನಗಳನ್ನು ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 5.47,662 ವಾಹನಗಳನ್ನು ಮಾರಾಟ ಮಾಡಲಾಗಿತ್ತು ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.