ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜೆಟ್‌ಏರ್‌ವೇಸ್‌ಗೆ 3.5ಕೋಟಿ ರೂಪಾಯಿ ನಿವ್ವಳ ಲಾಭ (Jet Airways | Q1| Net profit)
Bookmark and Share Feedback Print
 
ದೇಶದ ಖಾಸಗಿ ವಿಮಾನಯಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜೆಟ್‌ಏರ್‌ವೇಸ್, ಜೂನ್ 30ಕ್ಕೆ ಮೊದಲ ತ್ರೈಮಾಸಿಕ ಅಂತ್ಯಗೊಂಡಂತೆ 3.52ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ, 225.33 ಕೋಟಿ ರೂಪಾಯಿಗಳ ನಷ್ಟ ಅನುಭವಿಸಿತ್ತು ಎಂದು ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.

ಜೆಟ್‌ಏರ್‌ವೇಸ್ ಸಂಸ್ಥೆಯ ಒಟ್ಟು ಆದಾಯ 3,023.21 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ, 2.428.36 ಕೋಟಿ ರೂಪಾಯಿಗಳಿಗೆ ತಲುಪಿತ್ತು ಎಂದು ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ