ಯುನಿಯನ್ ಬ್ಯಾಂಕ್ ನಿವ್ವಳ ಲಾಭದಲ್ಲಿ ಶೇ.36ರಷ್ಟು ಹೆಚ್ಚಳ
ಮುಂಬೈ, ಸೋಮವಾರ, 26 ಜುಲೈ 2010( 13:12 IST )
ಸಾರ್ವಜನಿಕ ಕ್ಷೇತ್ರದ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ, ಜೂನ್ 30ಕ್ಕೆ ವಾರಂತ್ಯಗೊಂಡಂತೆ, ನಿವ್ವಳ ಲಾಭದಲ್ಲಿ ಶೇ.36.01ರಷ್ಟು ಏರಿಕೆಯಾಗಿ 601.42 ಕೋಟಿ ರೂಪಾಯಿಗಳಿಗೆ ತಲುಪಿದೆ.
ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭ 442.19 ಕೋಟಿ ರೂಪಾಯಿಗಳಾಗಿತ್ತು ಎಂದು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.
ಮೊದಲ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಆದಾಯದಲ್ಲಿ ಶೇ.11.25ರಷ್ಟು ಏರಿಕೆಯಾಗಿದ್ದು,4,120.66 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 3,704 ಕೋಟಿ ರೂಪಾಯಿಗಳಿಗೆ ತಲುಪಿತ್ತು.
ಯುನಿಯನ್ ಬ್ಯಾಂಕ್‌ನ ಒಟ್ಟು ನಾನ್-ಪರ್ಫಾಮಿಂಗ್ ಅಸೆಟ್‌ಗಳು ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ.2.19ರಷ್ಟು ಏರಿಕೆಯಾಗಿದೆ. ಕಳೆದ ವರ್ಷದ ಅವಧಿಯಲ್ಲಿ ಶೇ.1.95ರಷ್ಟಾಗಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.