ಸತ್ಯಂನ ಬಹುಕೋಟಿ ಹಗರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಜುಲೈ29ಕ್ಕೆ ಮುಂದೂಡಿದೆ.
ಸತ್ಯಂ ಬ್ಯಾಂಕ್ ದಾಖಲೆಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಕಂಪೆನಿಯ ಮಾಜಿ ಅಧ್ಯಕ್ಷ ಬಿ.ರಾಮಲಿಂಗಾರಾಜು ಸೇರಿದಂತೆ 10 ಮಂದಿ ಆರೋಪಿಗಳ ವಿಚಾರಣೆ ಜುಲೈ 29 ರಂದು ನಡೆಯಲಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ನ್ಯಾಯಾಂಗ ಬಂಧನದಲ್ಲಿರುವ ಹಾಗೂ ಹೆಪಾಟಿಟಿಸ್-ಸಿ ರೋಗಕ್ಕೆ ನಿಜಾಮ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ಕಂಪೆನಿಯ ಮಾಜಿ ಅದ್ಯಕ್ಷ ರಾಜು ಹೊರತುಪಡಿಸಿ, ಜಾಮೀನು ಪಡೆದ ಇತರ ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಶ್ರೀಶೈಲಂ ಮತ್ತು ರಾಜು ಸಹೋದರ ಸೂರ್ಯನಾರಾಯಣಾ ರಾಜು ರಾಮಲಿಂಗಾ ರಾಜು ಅವರಿಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ನ್ಯಾಯಾಲಯ, ಸದ್ಯಕ್ಕೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.