ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಬಲವರ್ಧನೆ (Rupee| Forex | Dollar)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 18 ಪೈಸೆ ಏರಿಕೆಯಾಗಿ 46.86 ರೂಪಾಯಿಗಳಿಗೆ ತಲುಪಿದೆ.

ಫಾರೆಕ್ಸ್ ಮಾರುಕಟ್ಟೆಯ ವಹಿವಾಟಿನಲ್ಲಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಇಳಿಕೆಯಾಗಿ 47.04/05 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 18 ಪೈಸೆ ಏರಿಕೆಯಾಗಿ 46.86 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 57.09 ಪಾಯಿಂಟ್‌ಗಳ ಏರಿಕೆ ಕಂಡು 18,077.14 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್