ಪ್ರಮುಖ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಕೆ ಕಂಡಿದ್ದರಿಂದ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿ 46.72 ರೂಪಾಯಿಗಳಿಗೆ ತಲುಪಿದೆ.
ಮಾಸಾಂತ್ಯದ ಹಿನ್ನೆಲೆಯಲ್ಲಿ, ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿರುವುದು, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 38 ಪೈಸೆ ಏರಿಕೆ ಕಂಡು 46.66/67 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿ 46.72 ರೂಪಾಯಿಗಳಿಗೆ ತಲುಪಿದೆ.
ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 59.53 ಪಾಯಿಂಟ್‌ಗಳಿಗೆ ಏರಿಕೆಯಾಗಿದ್ದು, 18,137.14 ಅಂಕಗಳಿಗೆ ತಲುಪಿದೆ.