ದೇಶದ ವಾಣಿಜ್ಯ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಶೋಕ್ ಲೆಲ್ಯಾಂಡ್, ಜೂನ್ 30ಕ್ಕೆ ಮೊದಲ ತ್ರೈಮಾಸಿಕ ಅಂತ್ಯಗೊಂಡಂತೆ,ನಿವ್ವಳ ಲಾಭದಲ್ಲಿ 16 ಪಟ್ಟು ಹೆಚ್ಚಳವಾಗಿ 122.64 ಕೋಟಿ ರೂಪಾಯಿಗಳಿಗೆ ತಲುಪಿದೆ.
ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 7.77 ಕೋಟಿ ರೂಪಾಯಿಗಳಷ್ಟು ನಿವ್ವಳ ಲಾಭಗಳಿಸಿತ್ತು ಎಂದು ಹಿಂದೂಜಾ ಮಾಲೀಕತ್ವದ ಕಂಪೆನಿ ಮುಂಬೈ ಶೇರುಪೇಟೆಗ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.
ಮೊದಲ ತ್ರೈಮಾಸಿಕ ಅವಧಿಯ ವಾಹನಗಳ ಮಾರಾಟದಲ್ಲಿ, ಎರಡು ಪಟ್ಟು ಹೆಚ್ಚಳವಾಗಿದ್ದು, 2,347.98 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 918 ಕೋಟಿ ರೂಪಾಯಿಗಳಿಗೆ ತಲುಪಿತ್ತು.