ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿ 46.68 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 9 ಪೈಸೆ ಇಳಿಕೆ ಕಂಡು 46.75/76 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿ 46.68 ರೂಪಾಯಿಗಳಿಗೆ ತಲುಪಿದೆ.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 12.77 ಪಾಯಿಂಟ್‌ಗಳ ಏರಿಕೆ ಕಂಡು 17,970.14 ಅಂಕಗಳಿಗೆ ತಲುಪಿದೆ.