ಠೇವಣಿ ಬಡ್ಡಿ ದರ ಹೆಚ್ಚಳ ಘೋಷಿಸಿದ ಎಚ್‌ಡಿಎಫ್‌ಸಿ ಬ್ಯಾಂಕ್
ಮುಂಬೈ, ಗುರುವಾರ, 29 ಜುಲೈ 2010( 17:48 IST )
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಳ ಘೋಷಿಸಿದ ನಂತರ, ಎಚ್‌ಡಿಎಫ್‌ಸಿ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಲಕ್ಷ್ಮಿ ವಿಲಾಸ್ ಬ್ಯಾಂಕ್‌ಗಳು ಸ್ಥಿರ ಠೇವಣಿಗಳ ಬಡ್ಡಿ ದರಗಳಲ್ಲಿ ಏರಿಕೆ ಘೋಷಿಸಿವೆ.
ಖಾಸಗಿ ಕ್ಷೇತ್ರದ ಪ್ರಮುಖ ಎಚ್‌ಡಿಎಫ್‌ಸಿ ಬ್ಯಾಂಕ್, ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಹೆಚ್ಚಳ ಘೋಷಿಸಿದ್ದು, ಜುಲೈ 30ರಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಲಕ್ಷ್ಮಿ ವಿಲಾಸ ಬ್ಯಾಂಕ್, ಸ್ಥಿರ ಠೇವಣಿ ದರಗಳಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಹೆಚ್ಚಿಸಿದೆ.ಇತರ ಬ್ಯಾಂಕ್‌ಗಳು ಠೇವಣಿ ಬಡ್ಡಿ ದರಗಳಲ್ಲಿ ಹೆಚ್ಚಳ ಘೋಷಿಸಲಿವೆ ಎಂದು ಬ್ಯಾಂಕಿಂಗ್ ಮೂಲಗಳು ತಿಳಿಸಿವೆ.
ಎಸ್‌ಬಿಐ ಮುಖ್ಯಸ್ಥ ಒ.ಪಿ.ಭಟ್ ಮಾತನಾಡಿ, ಆರ್‌ಬಿಐ ರೆಪೋ ದರಗಳನ್ನು ಹೆಚ್ಚಿಸಿದ್ದರಿಂದ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.