ಸಣ್ಣ ಮತ್ತು ಅತಿ ಸಣ್ಣ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಾಲ ಮನ್ನಾ ಪ್ಯಾಕೇಜ್ ಘೋಷಣೆ ಮಾಡಿದ್ದು, ಆ ಪ್ರಕಾರ ಶೇ 25ರಷ್ಟು ಸಾಲದ ಹಣವನ್ನು ಭರಿಸುವ ಶಕ್ತಿ ತಮಗಿಲ್ಲ ಎಂದು ಸ್ಥಳೀಯ ಸಹಕಾರಿ ಬ್ಯಾಂಕುಗಳ ಆಡಳಿತ ಮಂಡಳಿಗಳು ಹೇಳಿರುವ ಹಿನ್ನೆಲೆಯಲ್ಲಿ, ಅದರಲ್ಲಿ ಅರ್ಧದಷ್ಟು ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.