ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸಿದ ಹಿನ್ನೆಲೆಯಲ್ಲಿ,ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲದ ಬಡ್ಡಿ ದರದಲ್ಲಿ 75ಬೇಸಿಸ್ ಪಾಯಿಂಟ್‌ಗಳನ್ನು ಹೆಚ್ಚಿಸಿದ್ದು 11.75ಕ್ಕೆ ತಲುಪಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಡ್ಡಿ ದರದಲ್ಲಿ ಏರಿಕೆ ಘೋಷಿಸಿದ್ದರಿಂದ, ಇತರ ಖಾಸಗಿ ಹಾಗೂ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು ಕೂಡಾ ಬಡ್ಡಿ ದರದಲ್ಲಿ ಏರಿಕೆ ಮಾಡುವ ಸಾಧ್ಯತೆಗಳಿವೆ. ಜುಲೈ 27 ರಂದು ನಡೆದ ಆರ್ಥಿಕ ಪರಿಷ್ಕರಣ ಸಭೆಯಲ್ಲಿ ಆರ್‌ಬಿಐ ರೆಪೋ ದರಗಳ ಏರಿಕೆ ಘೋಷಿಸಿತ್ತು.
ಸಾರ್ವಜನಿಕ ಕ್ಷೇತ್ರದ ಪಂಜಾಬ್ ಬ್ಯಾಂಕ್, ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಕೂಡಾ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳಕ್ಕೆ ಆದೇಶಿಸಿದ್ದು, ಅಗಸ್ಟ್ 1ರಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್, ರೆಪೋ ದರಗಳಲ್ಲಿ ಶೇ.0.25ರಷ್ಟು ಹಾಗೂ ರಿವರ್ಸ್ ರೆಪೋ ದರದಲ್ಲಿ ಶೇ.0.50ರಷ್ಟು ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.