ದೇಶದ ಖಾಸಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿರುವ ಐಸಿಐಸಿಐ ಬ್ಯಾಂಕ್, ಸಾಲದ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಕಾರ್ಪೋರೇಟ್ ಕಂಪೆನಿಗಳು ಚೇತರಿಕೆಯ ತ್ರೈಮಾಸಿಕ ಫಲಿತಾಂಶದಿಂದಾಗಿ ಜೂನ್ 30ಕ್ಕೆ ವಾರಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ಶೇ.17ರಷ್ಟು ಏರಿಕೆಯಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಹಲವಾರು ಪ್ರಮುಖ ಬ್ಯಾಂಕ್‌ಗಳು ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭಗಳಿಸಿವೆ ಆರ್ಥಿಕತೆ ಚೇತರಿಕೆಯಿಂದಾಗಿ ಜಿಡಿಪಿ ದರ ಶೇ.8.5ಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಸಿಐಸಿಐ ಬ್ಯಾಂಕ್, ಏಪ್ರಿಲ್-ಜೂನ್ ತಿಂಗಳ ಅವಧಿಯ ನಿವ್ವಳ ಲಾಭ 10.26 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವದಿಯಲ್ಲಿ 8.78 ಬಿಲಿಯನ್ ರೂಪಾಯಿಗಳಿಗೆ ತಲುಪಿತ್ತು ಎಂದು ಬ್ಯಾಂಕ್ ಮುಂಬೈ ಶೇರುಪೇಟೆಗೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ.
ಶೇರುಪೇಟೆಯಲ್ಲಿ ಐಸಿಐಸಿಐ ಬ್ಯಾಂಕ್ ಶೇರುಗಳು ಒಟ್ಟು 22 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ.ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.3ರಷ್ಟು ಏರಿಕೆಯಾಗಿದೆ.