ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 46.15 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 16 ಪೈಸೆ ಏರಿಕೆ ಕಂಡು 46.24/25 ರೂಪಾಯಿಗಳಿಗೆ ತಲುಪಿ ಮುಕ್ತಾಯವಾಗಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 46.15 ರೂಪಾಯಿಗಳಿಗೆ ತಲುಪಿದೆ.
ಫಾರೆಕ್ಸ್ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಅಮೆರಿಕದ ಕರೆನ್ಸಿ ಡಾಲರ್ ಎದುರಿಗೆ,ಏಷ್ಯಾದ ಇತರ ಕರೆನ್ಸಿಗಳು ಚೇತರಿಕೆ ಕಂಡಿರುವುದು ಕೂಡಾ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86.24 ಪಾಯಿಂಟ್‌ಗಳ ಏರಿಕೆ ಕಂಡು 18,167.45 ಅಂಕಗಳಿಗೆ ತಲುಪಿದೆ.