ಸರಕಾರಿ ಸ್ನಾಮ್ಯದ ಟೆಲಿಕಾಂ ಕಂಪೆನಿಯಾದ ಬಿಎಸ್‌ಎನ್‌ಎಲ್‌ನ ಹಂಗಾಮಿ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಗೋಪಾಲ್ ದಾಸ್ ನೇಮಕಗೊಂಡಿದ್ದಾರೆ.
ಬಿಎಸ್‌ಎನ್‌ಎಲ್ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕುಲದೀಪ್ ಗೋಯಲ್ ಜುಲೈ 31ರಂದು ನಿವೃತ್ತಿಯಾಗಿದ್ದರಿಂದ, ತೆರುವಾದ ಸ್ಥಾನಕ್ಕೆ ಗೋಪಾಲ್ ದಾಸ್ ಅವರನ್ನು ನೇಮಕ ಮಾಡಲಾಗಿದೆ.
ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ದಾಸ್, ಸರಕಾರದ ನೇಮಕ ಸಮಿತಿ ಮೂತನ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಬಿಎಸ್‌ಎನ್‌ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರಕಾರ ಸಂಪುಟ ಕಾರ್ಯದರ್ಶಿಯನ್ನೊಳಗೊಂಡ ಸಮಿತಿಯನ್ನು ರಚಿಸಿದ್ದು, ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.
ಆಯ್ಕೆ ಸಮಿತಿ, ಸರಕಾರಿ ಹಾಗೂ ಖಾಸಗಿ ಕ್ಷೇತ್ರದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸುವಂತೆ ಅಹ್ವಾನ ನೀಡಿದೆ.