ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | Dollar | Foreign Exchange market | Depreciate)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ದಿನದ ಆರಂಭಿಕ ವಹಿವಾಟಿನಲ್ಲಿ 7 ಪೈಸೆ ಕುಸಿತ ಕಂಡು 46.23 ರೂಪಾಯಿಗಳಿಗೆ ತಲುಪಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಅಲ್ಪ ಕುಸಿತ ಕಂಡು 46.16/17 ರೂಪಾಯಿಗಳಿಗೆ ತಲುಪಿತ್ತು.

ಅಮೆರಿಕದ ಸೇವಾ ಕ್ಷೇತ್ರಗಳ ಚೇತರಿಕೆಯಿಂದ, ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಚೇತರಿಕೆಯಾಗಿದ್ದರಿಂದ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 65.87 ಪಾಯಿಂಟ್‌ಗಳ ಏರಿಕೆ ಕಂಡು 18,283.31 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ