ಕೇಂದ್ರ ಸರಕಾರ ತೆಗೆದುಕೊಂಡ ಕಠಿಣ ಕ್ರಮಗಳಿಂದಾಗಿ, ಕಳೆದ ಡಿಸೆಂಬರ್‌ನಲ್ಲಿ ಶೇ.21.6ರಷ್ಟಿದ್ದ ಆಹಾರ ಹಣದುಬ್ಬರ ದರ, ಇದೀಗ ಶೇ.9.53ಕ್ಕೆ ಇಳಿಕೆಯಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.
ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ, ಸರಕಾರ ತೆಗೆದುಕೊಂಡ ಕೆಲ ಕಠಿಣ ಆರ್ಥಿಕ ನೀತಿಗಳಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಶೇ.21.6ರಷ್ಟಿದ್ದ ಆಹಾರ ಹಣದುಬ್ಬರ ದರ, ಇದೀಗ ಶೇ.9.53ಕ್ಕೆ ಇಳಿಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ತರಕಾರಿ ದರಗಳ ಇಳಿಕೆಯಿಂದಾಗಿ ಜುಲೈ 24ಕ್ಕೆ ವಾರಂತ್ಯಗೊಂಡಂತೆ, ವಾರ್ಷಿಕ ಆಹಾರ ಹಣದುಬ್ಬರ ದರ ಶೇ.9.53ಕ್ಕೆ ಕುಸಿತಗೊಂಡಿದೆ.