ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Dollar | Capital inflows | Foreign Exchange)
Bookmark and Share Feedback Print
 
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಆರು ವಾರಗಳ ಗರಿಷ್ಠ 11 ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆ ಕಂಡು 46.19/20 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಆರು ವಾರಗಳ ಗರಿಷ್ಠ 11 ಪೈಸೆ ಏರಿಕೆ ಕಂಡಿದೆ.

ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಸೆಬಿ ಅಂಕಿ ಅಂಶಗಳ ಪ್ರಕಾರ ಹಿಂದಿನ ದಿನದ ವಹಿವಾಟಿನಲ್ಲಿ, ವಿದೇಶಿ ಬಂಡವಾಳದ ಒಳಹರಿವು 860 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ವರದಿಯಲ್ಲಿ ಬಹಿರಂಗಪಡಿಸಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತ ಕಂಡಿರುವುದು ಕೂಡಾ, ರೂಪಾಯಿ ಮೌಲ್ಯದ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ, 33.49 ಪಾಯಿಂಟ್‌ಗಳ ಏರಿಕೆ ಕಂಡು 18,206.32 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ