ನಷ್ಟದಲ್ಲಿರುವ ಬ್ಯಾಂಕ್ ಆಫ್ ರಾಜಸ್ತಾನವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ದೇಶದ ಖಾಸಗಿ ರಂಗದ ಅತಿ ದೊಡ್ಡ ಬ್ಯಾಂಕ್ ಆಗಿರುವ ಐಸಿಐಸಿಐ ಬ್ಯಾಂಕ್ ಈಗ ಭಾರತೀಯ ರಿಸರ್ವ್ ಬ್ಯಾಂಕಿನ ಅನುಮೋದನೆಯನ್ನು ಎದುರು ನೋಡುತ್ತಿದೆ. ಈಗಾಗಲೇ ಈ ಸಂಬಂಧ ಐಸಿಐಸಿಐ ಬ್ಯಾಂಕ್ ಮನವಿ ಸಲ್ಲಿಸಿದ್ದು, ಅರ್ಜಿ ಕೇಂದ್ರೀಯ ಬ್ಯಾಂಕಿನ ಪರಿಶೀಲನೆಯಲ್ಲಿದೆ.