ದೇಶದ ಸಾರ್ವಜನಿಕ ಕ್ಷೇತ್ರದ ಬ್ಯಾಕಿಂಗ್ ವಲಯದಲ್ಲಿ ಅಗ್ರಸ್ಥಾನದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಜೂನ್ 30ಕ್ಕೆ ಮೊದಲ ತ್ರೈಮಾಸಿಕ ಅಂತ್ಯಗೊಂಡಂತೆ ನಿವ್ವಳ ಲಾಭ ಶೇ.21.54ರಷ್ಟು ಏರಿಕೆಯಾಗಿ 3,467.09 ಕೋಟಿ ರೂಪಾಯಿಗಳಿಗೆ ತಲುಪಿದೆ.
ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ, 2,852.45 ಕೋಟಿ ರೂಪಾಯಿಗಳ ಲಾಭವಾಗಿತ್ತು ಎಂದು ಎಸ್‍ಬಿಐ ಬ್ಯಾಂಕ್ ಮುಂಬೈ ಶೇರುಪೇಟೆಗೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ.
ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದ ಒಟ್ಟು ಆದಾಯ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ, 32,808.06 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯ ನಿವ್ವಳ ಆದಾಯ 33,132.7 ಕೋಟಿ ರೂಪಾಯಿಗಳಾಗಿತ್ತು ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸ್ಟ್ಯಾಂಡ್‌ಲೋನ್ ಆಧಾರದಲ್ಲಿ ಎಸ್‌ಬಿಐ ನಿವ್ವಳ ಲಾಭ ಶೇ.25ರಷ್ಟು ಏರಿಕೆಯಾಗಿ 2,914.2 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 2,330.37 ಕೋಟಿ ರೂಪಾಯಿಗಳಾಗಿತ್ತು ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.