ಠೇವಣಿ ಹಾಗೂ ಸಾಲದ ಮೇಲಿನ ಬಡ್ಡಿದರವನ್ನು ಕನಿಷ್ಠ 25ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಮಾಡಲು, ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿರುವ ಸ್ಟೇಟ್ ಭ್ಯಾಂಕ್ ಆಫ್ ಇಂಡಿಯಾ ನಿರ್ಧರಿಸಿದೆ ಎಂದು ಬ್ಯಾಂಕಿಂಗ್ ಮೂಲಗಳು ತಿಳಿಸಿವೆ.
ಠೇವಣಿ ಹಾಗೂ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಬಡ್ಡಿ ದರಗಳಲ್ಲಿ ಏರಿಕೆಯಾಗಲಿವೆ ಎಂದು ಸ್ಟೇಟ್ ಬ್ಯಾಂಕ್ ಇಂಡಿಯಾದ ವ್ಯವಸ್ಥಾಪಕ ಒ.ಪಿ.ಭಟ್ ತಿಳಿಸಿದ್ದಾರೆ.
ಬಡ್ಡಿ ದರ ಎಷ್ಟರಮಟ್ಟಿಗೆ ಏರಿಕೆಯಾಗಲಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಭಟ್,ಕನಿಷ್ಠ 25ಬೇಸಿಸ್ ಪಾಯಿಂಟ್‌ಗಳನ್ನು ಏರಿಕೆ ಮಾಡುವ ನಿರೀಕ್ಷೆಯಿದೆ. ಆದರೆ, ಯಾವಾಗ ಜಾರಿಗೊಳಿಸಲಾಗುತ್ತದೆ ಎನ್ನುವ ಬಗ್ಗೆ ಸದ್ಯಕ್ಕೆ ಹೇಳಲಾಗದು ಎಂದು ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ ಜೂನ್ 27 ರಂದು ರೆಪೋ ದರಗಳನ್ನು ಹೆಚ್ಚಿಸಿದ ನಂತರ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್ ಸೇರಿದಂತೆ ಬಹುತೇಕ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು ಬಡ್ಡಿ ದರಗಳಲ್ಲಿ ಏರಿಕೆ ಘೋಷಿಸಲಿವೆ.
ಹಣದುಬ್ಬರ ದರ ನಿರಂತರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಹಣದುಬ್ಬರ ದರ ನಿಯಂತ್ರಣಕ್ಕಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಏರಿಕೆಯನ್ನು ಘೋಷಿಸಿದೆ.
ಖಾಸಗಿ ಬ್ಯಾಂಕ್‌ಗಳಾದ ಐಸಿಐಸಿಐ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ, ಒರಿಯಂಟಲ್ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳು ಕೂಡಾ ಬಡ್ಡಿ ದರಗಳಲ್ಲಿ ಏರಿಕೆ ಘೋಷಿಸಿವೆ.