ಕೈಗಾರಿಕೆ ವೃದ್ಧಿ ದರ 13 ತಿಂಗಳ ಇಳಿಕ ಕಂಡು ಶೇ.7.1ಕ್ಕೆ ತಲುಪಿದ ಹಿನ್ನೆಲೆಯಲ್ಲಿ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳನ್ನು ಮುಖ್ಯಸ್ಥರನ್ನು ಭೇಟಿ ಮಾಡಿ ಚರ್ಚಿಸಲು ವಿತ್ತಸಚಿವ ಪ್ರಣಬ್ ಮುಖರ್ಜಿ ಶನಿವಾರದಂದು ಸಭೆಯನ್ನು ಕರೆದಿದ್ದಾರೆ ಎಂದು ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.
ಪ್ರಸ್ತುತ ವರ್ಷದಲ್ಲಿ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಗತಿ ಹಾಗೂ ಸಾಧನೆ ಪರಿಶೀಲನೆ ಕೂಡಾ ನಡೆಸುವ ನಿರೀಕ್ಷೆಗಳಿವೆ ಎಂದು ವಿತ್ತ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್‌ಗಳ ಬಡ್ಡಿ ದರಗಳ ಏರಿಕೆ ಘೋಷಣೆಯಿಂದಾಗಿ ವಾಹನೋದ್ಯಮ, ಗೃಹ ಮತ್ತು ಶೈಕ್ಷಣಿಕ ಸಾಲಗಳ ಕ್ಷೇತ್ರಗಳ ಬೀರಿರುವ ಪ್ರಭಾವ ಕುರಿತಂತೆ ಸಂವಾದ ನಡೆಸಲಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಕಾರ್ಪೋರೇಶನ್ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳು ಕಡಿಮೆ ಅವಧಿಯ ಸಾಲದ ಮೇಲಿನ ಬಡ್ಡಿ ದರವನ್ನು 50 ಮತ್ತು 25ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಳ ಘೋಷಿಸಿವೆ.
ವಿತ್ತಸಚಿವ ಪ್ರಣಬ್ ಮುಖರ್ಜಿ, ಕೃಷಿ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಬ್ಯಾಂಕ್‌ಗಳು ನೀಡಿದ ಸಾಲದ ಪ್ರಮಾಣ ಹಾಗೂ ಆರ್ಥಿಕ ಹರಿವು ಕುರಿತಂತೆ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.