ಸಾಗರೋತ್ತರ ಮಾರುಕಟ್ಟೆಗಳ ದುರ್ಬಲ ವಹಿವಾಟು ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಏರಿಕೆಯಾಗಿ 46.76/77 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಕುಸಿತವಾಗಿದೆ.
ಜಾಗತಿಕ ಮಾರುಕಟ್ಟೆಗಳ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಚೇತರಿಸಿಕೊಂಡಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 73.32 ಪಾಯಿಂಟ್‌ಗಳ ಏರಿಕೆ ಕಂಡು 18,093.71 ಅಂಕಗಳಿಗೆ ತಲುಪಿದೆ.