ಭಾರತೀಯ ರಿಸರ್ವ್ ಬ್ಯಾಂಕ್ ಕಠಿಣ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ, ಜುಲೈ ತಿಂಗಳ ಅವಧಿಯಲ್ಲಿ ದರ ಇಳಿಕೆಯಾಗಿವೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಸೂಕ್ತ ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ,ಹಣದುಬ್ಬರ ದರದಲ್ಲಿ ಇಳಿಕೆಯಾಗಿದೆ. ಇಲ್ಲವಾದಲ್ಲಿ ಹಣದುಬ್ಬರ ಮತ್ತಷ್ಟು ಏರಿಕೆಯಾಗುತ್ತಿತ್ತು ಎಂದು ಸಚಿವ ಮುಖರ್ಜಿ ಸಂಸತ್ತಿನ ಆವರಣದಲ್ಲಿ ಉಪಸ್ಥಿತರಿದ್ದ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉತ್ಪಾದಕ ವಸ್ತುಗಳ ದರ ಇಳಿಕೆಯಾಗಿ ಸುಮಾರು ನಾಲ್ಕು ತಿಂಗಳುಗಳ ನಂತರ, ಜುಲೈ ತಿಂಗಳ ಅವಧಿಯಲ್ಲಿ ಹಣದುಬ್ಬರ ದರ ಶೇ.10ಕ್ಕಿಂತ ಕಡಿಮೆ ಇಳಿಕೆಯಾಗಿದೆ.
ಪ್ರಸಕ್ತ ಋತುವಿನಲ್ಲಿ ಮುಂಗಾರು ಮಳೆ ಉತ್ತಮವಾಗಿರುವುದರಿಂದ,ಮುಂಬರುವ ದಿನಗಳಲ್ಲಿ ಅಹಾರ ದರಗಳು ಇಳಿಕೆ ಕಾಣಲಿವೆ ಎಂದು ಮುಖರ್ಜಿ ತಿಳಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅವಧಿಯಲ್ಲಿ ಹಣದುಬ್ಬರ ಏರಿಕೆಯಾದ ನಂತರ, ಭಾರತೀಯ ರಿಸರ್ವ್ ಬ್ಯಾಂಕ್, ರೆಪೋ ದರಗಳಲ್ಲಿ ನಾಲ್ಕು ಬಾರಿ ಏರಿಕೆ ಮಾಡಿದೆ.