ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಏರಿಕೆಯಾಗಿ 46.68 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ ಕಂಡು 46.80/81ರೂಪಾಯಿಗಳಿಗೆ ತಲುಪಿದೆ.
ಫಾರೆಕ್ಸ್ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಡಾಲರ್ ಎದುರಿಗೆ ಇತರ ಕರೆನ್ಸಿಗಳ ಚೇತರಿಕೆಯಿಂದಾಗಿ ರೂಪಾಯಿ ಮೌಲ್ಯದ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 81.44 ಪಾಯಿಂಟ್‌ಗಳ ಏರಿಕೆ ಕಂಡು 18,132.22 ಅಂಕಗಳಿಗೆ ತಲುಪಿದೆ.